Tumbe Group of International Journals

Full Text


ಸರ್ ಎಂ ವಿಶ್ವೇಶ್ವರಯ್ಯ ಅವರ ಬಗ್ಗೆ ಕಿರು ಪರಿಚಯ

ಅನಿತ ಪಿ

U11GT21C0791

ಬಿಕಾಂ ಮೊದಲನೇ ವರ್ಷ, ದ್ವಿತೀಯ ಸೆಮಿಸ್ಟರ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು -572104

yatheeshabp1990@gmail.com                   Ph.no: 8310141144


ಈ ನಾಡಿನ ಮಹತ್ವದ ಚಿಂತನೆಗಳ ಹಿಂದಿರುವ ಪ್ರೇರಕ ಶಕ್ತಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರು, ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಮೂಲ ಕಾರಣಕರ್ತರೂ ಹೌದು. ಸರ್ ಎಂ ವಿ (ಸೆಪ್ಟೆಂಬರ್ 15, 1861 - ಏಪ್ರಿಲ್ 12, 1962) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು 1912 ರಿಂದ 1918 ರ ವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದರು. ಇವರು ಹುಟ್ಟಿದ ದಿನವನ್ನು ಭಾರತ ದೇಶಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

 

 

ವಿಶ್ವೇಶ್ವರಯ್ಯನವರು ಜನಿಸಿದ್ದು ಸೆಪ್ಟೆಂಬರ್ 15, 1860ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಎಂಬಲ್ಲಿ. ವಿಶ್ವೇಶ್ವರಯ್ಯನವರ ತಂದೆ ಶ್ರೀನಿವಾಸ ಶಾಸ್ತ್ರಿ ತಾಯಿ ವೆಂಕಟ ಲಕ್ಷ್ಮಮ್ಮ. ಅವರ ಪೂರ್ವಜರು ಈಗಿನ ಆಂಧ್ರಪ್ರದೇಶದ ಮೋಕ್ಷಗುಂಡಂ ಎಂಬ ಸ್ಥಳದಿಂದ ವಲಸೆ ಬಂದು ಮುದ್ದೇನಹಳ್ಳಿಯಲ್ಲಿ ವಾಸವಾಗಿದ್ದ ಕಾರಣ ಅವರ ಹೆಸರಿನೊಡನೆ ಮೋಕ್ಷಗುಂಡಂ ಸೇರಿಕೊಂಡಿದೆ. ವಿಶ್ವೇಶ್ವರಯ್ಯನವರ ತಂದೆ ಸಂಸ್ಕೃತ ವಿದ್ವಾಂಸರು; ಧರ್ಮಶಾಸ್ತ್ರಗಳನ್ನು ಧರ್ಮಶಾಸ್ತ್ರವನ್ನು ಆಳವಾಗಿ ಅಭ್ಯಾಸ ಮಾಡಿದ್ದರಲ್ಲದೆ ಆಯುರ್ವೇದ ತಜ್ಞರೂ ಆಗಿದ್ದರು. ಅವರು 15 ವರ್ಷದವರಿರುವಾಗಲೇ ತಂದೆಯು ನಿಧನರಾದರು. ವಿಶ್ವೇಶ್ವರಯ್ಯನವರ ಪ್ರಾಥಮಿಕ ಶಿಕ್ಷಣ ಚಿಕ್ಕಬಳ್ಳಾಪುರದಲ್ಲಿ ಮತ್ತು ಪ್ರೌಢ ಶಿಕ್ಷಣ ಬೆಂಗಳೂರಿನಲ್ಲಿ ನಡೆಯಿತು. ೧೮೮೧ರಲ್ಲಿ ಮದ್ರಾಸು ವಿಶ್ವವಿದ್ಯಾಲಯದಿಂದ ಬಿಎ ಪದವಿಯನ್ನು ಪಡೆದು ನಂತರ ಪೂಣೆಯ ವಿಜ್ಞಾನ ಕಾಲೇಜಿನಿಂದ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದರು.

ವಿಶ್ವೇಶ್ವರಯ್ಯನವರು ನಂತರ ೧೮೮೪ರಲ್ಲಿ ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಸೇರಿದರು. ಇದಾದ ಮೇಲೆ ಭಾರತೀಯ ನೀರಾವರಿ ಆಯೋಗದಿಂದ ಅವರಿಗೆ ಆಮಂತ್ರಣ ಬಂದಿತು. ಈ ಆಯೋಗವನ್ನು ಸೇರಿದ ನಂತರ ದಖ್ಖನ್ ಪ್ರಸ್ಥಭೂಮಿಯಲ್ಲಿ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ ವಿ ಯವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು.

ವೃತ್ತಿಜೀವನ

ವಿಶ್ವೇಶ್ವರಯ್ಯನವರು ನಂತರ ಮುಂಬೈ ನಗರದಲ್ಲಿ ಲೋಕೋಪಯೋಗಿ ಇಲಾಖೆಯನ್ನು 1884 ರಲ್ಲಿ ಸೇರಿದರು. ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ನಿಂದ ಇವರಿಗೆ ಆಮಂತ್ರಣ ಬಂದಿತು. ಈ ಕಮಿಷನನ್ನು ಸೇರಿದ ನಂತರ ದಖ್ಖನ್ ಪ್ರಸ್ಥಭೂಮಿಯಲ್ಲಿ ಉತ್ತಮವಾದ ನೀರಾವರಿ ವ್ಯವಸ್ಥೆಯನ್ನು ವಿಶ್ವೇಶ್ವರಯ್ಯನವರು ಪರಿಚಯಿಸಿದರು. ಸರ್ ಎಂ ವಿ ಅವರು ಅರ್ಥರ್ ಕಾಟನ್ ರವರಿಂದ ಬಹಳಷ್ಟು ಪ್ರಭಾವಿತರಾಗಿದ್ದರು. ಕಾವೇರಿ ನದಿಗೆ ಅಣೆಕಟ್ಟು ಕಟ್ಟುವಲ್ಲಿ ಅವರು ತಿರುಚನಾಪಳ್ಳಿಯಲ್ಲಿ ಚೋಳ ರಾಜರಿಂದ ನಿರ್ಮಿಸಲ್ಪಟ್ಟ ಹಾಗೂ 18ನೇ ಶತಮಾನದ ಅರ್ಧದಲ್ಲಿ ಅರ್ಥರ್ ಕಾಟನ್ ರವರಿಂದ ಸಂಪೂರ್ಣವಾಗಿ ನವೀಕರಿಸಲ್ಪಟ್ಟ ಬೃಹತ್ ಅಣೆಕಟ್ಟು (ಗ್ರಾಂಡ್ ಅಣೆಕಟ್ಟು) ನ್ನು ನೋಡಿ ಪ್ರಭಾವಿತರಾಗಿದ್ದರು. ನಂತರ ಮಹಾರಾಜರಲ್ಲಿ ಇದನ್ನು ವರದಿ ಮಾಡಿದರು.

ಅಣೆಕಟ್ಟುಗಳಲ್ಲಿ ಉಪಯೋಗಿಸಲಾಗುವ ಸ್ವಯಂ ಚಾಲಿತ ಫ್ಲಡ್ ಗೇಟ್ ವಿನ್ಯಾಸವೊಂದನ್ನು ಕಂಡುಹಿಡಿದು ಅದಕ್ಕಾಗಿ ಪೇಟೆಂಟ್ ಪಡೆದರು. ಮೊದಲ ಬಾರಿಗೆ 193ರಲ್ಲಿ ಈ ಫ್ಲೆಟ್ ಗೇಟ್ ಗಳು ಪೂಣೆಯ ಖಡಕ್ವಾಸ್ಲಾ ಅಣೆಕಟ್ಟಿನಲ್ಲಿ ಸ್ಥಾಪಿತವಾದವು. ಇಲ್ಲಿ ಅವು ಯಶಸ್ವಿಯಾದ ನಂತರ ಗ್ವಾಲಿಯರ್ ನ ಟಿಗ್ರಾ ಅಣೆಕಟ್ಟು ಮತ್ತು ಕರ್ನಾಟಕದ ಕೃಷ್ಣರಾಜಸಾಗರ ಅಣೆಕಟ್ಟುಗಳಲ್ಲಿ ಸಹ ಉಪಯೋಗಿತವಾದವು. ಈ ಗೇಟ್ಗಳ ಉದ್ದೇಶ ಅಣೆಕಟ್ಟಿಗೆ ಹಾನಿ ಮಾಡದೆ ಗರಿಷ್ಠ ಮಟ್ಟದ ನೀರನ್ನು ಶೇಖರಿಸಿಡುವುದೇ ಆಗಿತ್ತು. ಕೃಷ್ಣರಾಜಸಾಗರವನ್ನು ಕಟ್ಟಿದಾಗ ಅದು ಆ ಕಾಲದಲ್ಲಿ ಭಾರತದ ಅತ್ಯಂತ ದೊಡ್ಡ ಅಣೆಕಟ್ಟು. ವಿಶ್ವೇಶ್ವರಯ್ಯನವರು ದೇಶದಾದ್ಯಂತ ಪ್ರಸಿದ್ಧರಾದದ್ದು ಹೈದರಾಬಾದ್ ನಗರವನ್ನು ಪ್ರವಾಹಗಳಿಂದ ರಕ್ಷಿಸಲು ಪ್ರವಾಹ ರಕ್ಷಣಾ ವ್ಯವಸ್ಥೆಯನ್ನು ಅವರು ಏರ್ಪಡಿಸಿದಾಗ. ಇವರ ಮುಖ್ಯ ಸೇವಕ ಪ್ರಶಾಂತ್.

ಸಾಧನೆ

1908ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ವಿಶ್ವೇಶ್ವರಯ್ಯನವರು ನಂತರ ಮೈಸೂರು ಸಂಸ್ಥಾನದ ದಿವಾನರಾಗಿ ಸೇವೆ ಸಲ್ಲಿಸಿದರು. ಮಹಾರಾಜ ಕೃಷ್ಣರಾಜ ಒಡೆಯರ್ ಅವರ ಜೊತೆ ಮೈಸೂರು ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಕೆಲಸ ಮಾಡಿದರು. 1917ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಸ್ಥಾಪಿಸಿದರು. ಇದೇ ಕಾಲೇಜಿಗೆ ನಂತರ ಅವರ ಹೆಸರನ್ನೇ ಇಡಲಾಯಿತು (ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್). ಮೈಸೂರು ವಿಶ್ವವಿದ್ಯಾಲಯದ ಬೆಳವಣಿಗೆಗಾಗಿಯೂ ಶ್ರಮಿಸಿದರು.

ಭಾರತ ದೇಶದಲ್ಲಿ ಮೊದಲ ಎಜು ಸೆಟ್ ತರಗತಿಗಳನ್ನು ಆರಂಭಿಸಿದ ಕೀರ್ತಿ ಬೆಳಗಾವಿಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಇದರ ಮುಖ್ಯ ಉದ್ದೇಶ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ನೀಡುವುದು. ಕರ್ನಾಟಕದಲ್ಲಿನ ಎಲ್ಲಾ ಇಂಜಿನಿಯರ್ ಕಾಲೇಜ್ಗಳು ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗವಾಗಿವೆ. ಇಂಜಿನಿಯರ್ ಕ್ಷೇತ್ರದಲ್ಲಿ ಇವರು ಸಲ್ಲಿಸಿರುವ ಅಪಾರ ಸೇವೆಯ ಸ್ಮರಣೆಗಾಗಿ ಇವರ ಜನ್ಮದಿನವನ್ನು (ಸೆಪ್ಟೆಂಬರ್ 15) ಭಾರತದಲ್ಲಿ ಪ್ರತಿ ವರ್ಷ ಇಂಜಿನಿಯರ್ಸ್ ದಿನವಾಗಿ ಆಚರಿಸಲಾಗುತ್ತದೆ.


Sign In  /  Register

Most Downloaded Articles

Acquire employability in Indian Sinario

The Pink Sonnet

Department of Mathematics @ GFGC Tumkur

Knowledge and Education- At Conjecture

ಗ್ರಾಮೀಣ ಪ್ರದೇಶದಲ್ಲಿ ಆಯಗಾರಿಕೆ ಸಂಸ್ಕೃತಿ




© 2018. Tumbe International Journals . All Rights Reserved. Website Designed by ubiJournal