Tumbe Group of International Journals

Full Text


ಲಾಲ್ ಬಹಾದುರ್ ಶಾಸ್ತ್ರಿ

ಕುಶಾಲ್ ಕುಮಾರ್ ಜಿ

U11GT21A0090

ಬಿಎ ಮೊದಲನೇ ವರ್ಷ, ದ್ವಿತೀಯ ಸೆಮಿಸ್ಟರ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು -572104

kushalgowda6662@gmail.com                      Ph.no: 9164464254


ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು.

ಜೀವನ

ಲಾಲ್ ಬಹಾದುರ್ ಮೊಘಲ್‌ ಸಾರಾಯ್‌ನಲ್ಲಿ ಜನಿಸಿದ್ದು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಲು ಇವರು ತಮ್ಮ ಓದನ್ನು ಅರ್ಧದಲ್ಲೇ ಬಿಟ್ಟರು. ೧೯೨೬ ರಲ್ಲಿ ಇವರಿಗೆ ಶಾಸ್ತ್ರಿ ಎಂಬ ಬಿರುದು ಕಾಶಿ ವಿದ್ಯಾ ಪೀಠದಿಂದ ಕೊಡಲ್ಪಟ್ಟಿತು. ಒಟ್ಟು ೯ ವರ್ಷಗಳ ಕಾಲ ಸ್ವಾತಂತ್ರ್ಯಕ್ಕಾಗಿ ಕಾರಾಗೃಹವಾಸ ಅನುಭವಿಸಿದ ಇವರು ಸತ್ಯಾಗ್ರಹ ಚಳುವಳಿ ಪ್ರಾರಂಭವಾದ ನಂತರ ೧೯೪೬ ರವರೆಗೂ ಜೈಲು ಶಿಕ್ಷೆ ಅನುಭವಿಸಿದರು.

ಗಾಂಧೀಜಿಯವರ ಜನ್ಮದಿನ‌ದಂದೇ ಜನ್ಮದಿನ.

ಶಿಕ್ಷಣ

ಅವರು ಪ್ರೌಢಶಾಲೆಗೆ ಹೋಗಲು ವಾರಣಾಸಿಯಲ್ಲಿ ಚಿಕ್ಕಪ್ಪನೊಂದಿಗೆ ವಾಸಿಸಲು ಕಳುಹಿಸಲಾಯಿತು. ನನ್ಹೆ, ಅಥವಾ ಮನೆಯಲ್ಲಿ ಕರೆಯುವ ‘ಚಿಕ್ಕವನು’, ಬೇಸಿಗೆಯ ಬಿಸಿಯಲ್ಲಿ ಬೀದಿಗಳು ಸುಟ್ಟುಹೋದಾಗಲೂ ಶೂಗಳಿಲ್ಲದೆ ಅನೇಕ ಮೈಲುಗಳಷ್ಟು ಶಾಲೆಗೆ ಹೋಗುತ್ತಿದ್ದನು.

ಅವರು ಬೆಳೆದಂತೆ, ಲಾಲ್ ಬಹದ್ದೂರ್ ಶಾಸ್ತ್ರಿ ಅವರು ವಿದೇಶಿ ನೊಗದಿಂದ ಸ್ವಾತಂತ್ರ್ಯಕ್ಕಾಗಿ ದೇಶದ ಹೋರಾಟದಲ್ಲಿ ಹೆಚ್ಚು ಹೆಚ್ಚು ಆಸಕ್ತಿ ಹೊಂದಿದ್ದರು. ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಭಾರತೀಯ ರಾಜಕುಮಾರರನ್ನು ಮಹಾತ್ಮಾ ಗಾಂಧಿಯವರು ಖಂಡಿಸಿದ್ದರಿಂದ ಅವರು ಬಹಳ ಪ್ರಭಾವಿತರಾದರು. ಆ ಸಮಯದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಕೇವಲ ಹನ್ನೊಂದು ವರ್ಷ, ಆದರೆ ಅವರನ್ನು ರಾಷ್ಟ್ರೀಯ ಹಂತಕ್ಕೆ ಏರಿಸುವ ಪ್ರಕ್ರಿಯೆಯು ಅವರ ಮನಸ್ಸಿನಲ್ಲಿ ಆಗಲೇ ಪ್ರಾರಂಭವಾಯಿತು.ಭಾರತ ಸರಕಾರಕ್ಕೆ ಸಲ್ಲಿಸಿದ ಸೇವೆ

ಸ್ವಾತಂತ್ರ ದೊರಕಿದ ಬಳಿಕ ಇವರು ಗೋವಿ೦ದ ವಲ್ಲಭ ಪ೦ತ್ ಅವರ ಸರಕಾರದಲ್ಲಿ ಪೋಲಿಸ್ ಖಾತೆಯನ್ನು ವಹಿಸಿಕೊಂಡಿದ್ದರು. ೧೯೫೧ರಲ್ಲಿ ಇವರು ಲೋಕ ಸಭೆಗೆ ಜನರಲ್ ಸೆಕ್ರೆಟರಿ ಆಗಿ ಆಯ್ಕೆಯಾದರು. ಇದರ ಪರ್ಯಾಯ ಇವರು ರೈಲ್ವೆ ಖಾತೆಯನ್ನು ವಹಿಸಿಕೊಂಡಿದ್ದೂ ಉಂಟು.

ಅರಿಯಳೂರು ಬಳಿ ಆದ ರೈಲ್ವೆ ದುರಂತದ ತರುವಾಯ ಇವರು ತಮ್ಮ ಖಾತೆಗೆ ರಾಜೀನಾಮೆ ನೀಡಿದರು. ಮತ್ತೊಮ್ಮೆ ಇವರು ಕ್ಯಾಬಿನೆಟ್‌ಗೆ ಮರಳಿದರು. ಮೊದಲು ಸಾರಿಗೆ ಮಂತ್ರಿ ಯಾಗಿ, ಬಳಿಕ ೧೯೬೧ರಲ್ಲಿ ಗೃಹ ಮಂತ್ರಿಯಾಗಿದ್ದರು. ಮೇ ೨೭, ೧೯೬೪ರಂದು ಜವಾಹರ್‌ಲಾಲ್ ನೆಹರು ತಮ್ಮ ಕಾರ್ಯಕಾಲದಲ್ಲಿ ಸಾವನ್ನಪ್ಪಿದರು.

ಸ್ವಲ್ಪ ಮಟ್ಟಿಗೆ ಖಾಲಿ ಖಾಲಿಯಾದ ರಾಜಕೀಯ ರಂಗವನ್ನು ಬಿಟ್ಟು ಅಗಲಿದ್ದರು. ಕಾಂಗ್ರೆಸ್‌ನ ಕೆಲವು ಪ್ರಮುಖ ಆಸ್ತಿಗಳಿಗೆ ತಮಗೆ ಬೇಕಾದ ಬೆಂಬಲ ಸಿಗದ ಕಾರಣ ತುಂಬಾ ಸರಳ ಅಧಿಕಾರ ದಾಹಿಯೇ ಅಲ್ಲದ ಶಾಸ್ತ್ರಿಗಳಿಗೆ ಪ್ರಧಾನಿಯಾಗಲು ಅವಕಾಶ ಸಿಕ್ಕಿತು. ಇವರು ಅದೇ ವರ್ಷ ಜೂನ್ ೯ ರಂದು ಭಾರತದ ಪ್ರಧಾನಿಯಾದರು.

ವಿವಾಹ

1927 ರಲ್ಲಿ, ಅವರು ವಿವಾಹವಾದರು. ಅವರ ಪತ್ನಿ ಲಲಿತಾ ದೇವಿ ಅವರು ತಮ್ಮ ಊರಿಗೆ ಸಮೀಪದ ಮಿರ್ಜಾಪುರದಿಂದ ಬಂದಿದ್ದರು. ಮದುವೆ ಎಲ್ಲಾ ಅರ್ಥಗಳಲ್ಲಿ ಸಾಂಪ್ರದಾಯಿಕವಾಗಿತ್ತು ಆದರೆ ಒಂದು. ನೂಲುವ ಚಕ್ರ ಮತ್ತು ಕೆಲವು ಗಜಗಳಷ್ಟು ಹ್ಯಾಂಡ್‌ಸ್ಪನ್ ಬಟ್ಟೆಯೆಲ್ಲವೂ ವರದಕ್ಷಿಣೆಯಾಗಿತ್ತು. ವರನು ಹೆಚ್ಚೇನೂ ಸ್ವೀಕರಿಸುವುದಿಲ್ಲ.

ಪ್ರಧಾನಿಯಾಗಿ ಲಾಲ್ ಬಹಾದುರ್ ಶಾಸ್ತ್ರಿಗಳು

  • ಆಗಿನ ಪ್ರಮುಖ ಸಮಸ್ಯೆ ಪಾಕಿಸ್ತಾನವಾಗಿತ್ತು. ಕಚ್ ಬಳಿ ನಡೆದ ಯುದ್ಧ ಯುಎನ್ ಮಧ್ಯಸ್ಥಿಕೆಯಿಂದ ನಿಂತು ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಪ್ರಾರಂಭವಾಯಿತು. ಎರಡನೇ ಭಾರತ-ಪಾಕ್ ಯುದ್ಧ ಪ್ರಾರಂಭವಾಗಿ ಭಾರತದ ಪಡೆ ಲಾಹೋರ್ ತಲುಪುತ್ತಲೇ ಶಾಂತಿ ಒಪ್ಪಂದ ಮಾಡಿ ಕೊಳ್ಳಲಾಯಿತು.
  • ಜನವರಿ ೧೯೬೬ರಲ್ಲಿ ಶಾಸ್ತ್ರಿ ಮತ್ತು ಮಹಮ್ಮದ್ ಆಯೂಬ್ ಖಾನ್ ಅಲೆಕ್ಸೈ ನಿಕೊಲಯೆವಿಚ್ ಕೊಸಿಜಿನ್ ಅವರಿಂದ ಆಯೋಜಿಸಲಾದ ಟಾಷ್ಕೆಂಟ್‌ನಲ್ಲಿ ನಡೆದ ಮಾತುಕತೆಯಲ್ಲಿ ಭಾಗವಹಿಸಿದರು. ಶಾಸ್ತ್ರಿಗಳು ಭಾರತದೊಂದಿಗೆ ಜನವರಿ ೧೦ ರಂದು ಒಂದು ಒಪ್ಪಂದಕ್ಕೆ ಸಹಿ ಹಾಕಿದರು. ಅದೇ ಟಾಶ್ಕೆಂಟ್ ಡಿಕ್ಲೆರೇಶನ್.
  • ಮರುದಿನವೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದರು; ಆದರೆ ಪಾಕಿಸ್ತಾನದವರೇ ಅವರ ಊಟದಲ್ಲಿ ವಿಷವನ್ನು ಹಾಕಿ ಕೊಂದರು ಎಂಬ ಊಹೆ ಇದೆ. ಆದರೆ ಅದನ್ನು ಅಲ್ಲಿಯ ವೈದ್ಯರು ದೃಡಪಡಿಸಿಲ್ಲ.
  • ಇವರು ಕಾರ್ಯಕಾಲದಲ್ಲಿ ದೇಶದಾಚೆ ಸಾವನ್ನಪ್ಪಿದ ಏಕೈಕ ಭಾರತದ ಪ್ರಧಾನ ಮಂತ್ರಿ ಹಾಗು ಈ ತರಹದ ದುರಂತಕ್ಕೆ ತುತ್ತಾದ ಇತಿಹಾಸದ ಬಹುಶಃ ಕೆಲವೇ ಕೆಲವು ಸರಕಾರದ ಮುಖ್ಯಸ್ಥರಲ್ಲಿ ಒಬ್ಬರು.
  • ಪ್ರಾಮಾಣಿಕ, ಸ್ವಾಭಿಮಾನಿ
  • ಇವರು ಬಹುಶಃ ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿಯಾಗಿದ್ದಾರೆ. ಇವರ ಪ್ರಾಮಾಣಿಕತೆಗೆ ಹಲವರು ತಲೆದೂಗಿದ್ದುಂಟು. ಹಾಗೆಯೇ ಇವರ ಸ್ವಾಭಿಮಾನ, ದೇಶಾಭಿಮಾನ ಕೂಡ ತಲೆದೂಗುವಂಹತದ್ದು.

ಶಾಸ್ತ್ರಿ ಸೋಮವಾರ

ಇವರು ಭಾರತವನ್ನು ಸ್ವಾಭಿಮಾನಿ ದೇಶವಾಗಿ ಮಾಡುವಲ್ಲಿ ಶ್ರಮವಹಿಸಿದ್ದಾರೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ದೇಶದಲ್ಲಿ ಬರಗಾಲ ಬಂದೊದಗಿತು. ಆಗ ಹೊರ ದೇಶದಿಂದ ಆಹಾರವನ್ನು ಆಮದು ಮಾಡಿಕೊಳ್ಳಬೇಕಾಯಿತು. ಸಾಲ ಭಾರ ಅಧಿಕವಾಯಿತು.

ಅದನ್ನರಿತ ಶಾಸ್ತ್ರಿ ವಾರದಲ್ಲಿ ಒಂದು ದಿನ ಊಟವನ್ನು ಬಿಟ್ಟರೆ ಎಷ್ಟು ಆಹಾರ ಸಂಗ್ರಹ ವಾಗುವುದೆಂದು ಲೆಕ್ಕಾಚಾರಹಾಕಿ, ಸೋಮವಾರ ರಾತ್ರಿ ಊಟವನ್ನು ಬಿಡಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಾವೂ ಸಹ ಸೋಮವಾರದ ಊಟವನ್ನು ತ್ಯಜಿಸಿದರು. ಇನ್ನೂ ಸಹ ಶಾಸ್ತ್ರಿಯವರ ಸೋಮವಾರವು ಪ್ರಚಲಿತದಲ್ಲಿದೆ. ಈ ನಿರ್ಣಯವು ಅವರ ಸ್ವಾಭಿಮಾನ ಯಾತ್ರೆಗೆ ಮುಕುಟ ಪ್ರಾಯದಂತಿದೆ.

ಪ್ರಶಸ್ತಿಗಳು

ಇವರಿಗೆ ಮರಣಾನಂತರ ಭಾರತ ರತ್ನವನ್ನು ಪ್ರಧಾನ ಮಾಡಲಾಯಿತು. ಇವರ ಸ್ಮರಣೆಗೆ ದೆಹಲಿಯಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿದೆ. ಇವರ ಜನಪ್ರಿಯ ವಾಕ್ಯ ಜೈ ಜವಾನ್, ಜೈ ಕಿಸಾನ್ ಇಂದಿಗೂ ಚಿರವಾಗಿ ಉಳಿದಿದೆ.


Sign In  /  Register

Most Downloaded Articles

Acquire employability in Indian Sinario

The Pink Sonnet

Department of Mathematics @ GFGC Tumkur

Knowledge and Education- At Conjecture

ಗ್ರಾಮೀಣ ಪ್ರದೇಶದಲ್ಲಿ ಆಯಗಾರಿಕೆ ಸಂಸ್ಕೃತಿ




© 2018. Tumbe International Journals . All Rights Reserved. Website Designed by ubiJournal