Tumbe Group of International Journals

Full Text


ದಕ್ಷಿಣ ಕಾಶಿ ಶಿವಗಂಗೆ

ರಂಜಿತ ಕೆ

U11GT21C0317

ಬಿಕಾಂ ಮೊದಲನೇ ವರ್ಷ, ದ್ವಿತೀಯ ಸೆಮಿಸ್ಟರ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು -572104

ranju208@gmail.com                      Ph.no: 6363124705


ಶಿವಗಂಗೆ ಒಂದು ಕಪ್ಪು ಗ್ರನೈಟ್ ಬೆಟ್ಟ ಇದು ಸಮುದ್ರ ಮಟ್ಟದಿಂದ ೧೩೮೦ ಮೀಟರ್ ಎತ್ತರದಲ್ಲಿ ಇದೆ.ಇದು ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿರುವ ಕರ್ನಾಟಕದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದು.ಇದು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಡಾಬಸ್ ಪೇಟೆಯಿಂದ ಸುಮಾರು ೬ ಕಿ.ಮೀ ಹಾಗೂ ತುಮಕೂರಿನಿಂದ ನಿಂದ 20 ಕಿಮಿ ದೂರದಲ್ಲಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರ ದೇವಾಲಯವಿದೆ. ಬೆಟ್ಟದ ಪ್ರಾರಂಭದಲ್ಲಿ ಶಿವನ ದೇವಾಲಯವಿದೆ. ಇಲ್ಲಿ ಶಿವ ಲಿಂಗದ ಮೇಲೆ ತುಪ್ಪವನ್ನು ಹಾಕಿದರೆ ಬೆಣ್ಣೆಯಾಗಿ ಪರಿವರ್ತನೆ ಆಗುತ್ತದೆ ಎಂದು ಪ್ರತೀತಿ. ಹಾಗೆಯೇ ಇಲ್ಲಿ ಒಂದು ಸಣ್ಣ ಸುರಂಗವಿದೆ. ಈ ಸುರಂಗದಲ್ಲಿ ಮುಂದುವರೆದರೆ ಶ್ರೀರಂಗಪಟ್ಟಣ ತಲುಪಬಹುದು ಎಂಬ ನಂಬಿಕೆ. ಬೆಟ್ಟದಲ್ಲಿ ಸ್ವಲ್ಪ ಮೇಲೆ ಏರಿದರೆ ಒಳಕಲ್ಲು ತೀರ್ಥ ಎನ್ನುವ ಮತ್ತೊಂದು ಸ್ಥಳವಿದೆ. ಇಲ್ಲಿರುವ ಒಳಕಲ್ಲಿನಲ್ಲಿ ವರ್ಷದ ೩೬೫ ದಿನಗಳೂ ನೀರು ದೊರೆಯುತ್ತದೆ. ಹಾಗೆ ಕಡಿದಾದ ಬೆಟ್ಟವನ್ನು ಏರುತ್ತಾ ಹೋದರೆ ಒಂದು ಶಿವಪಾರ್ವತಿಯ ದೇವಸ್ತಾನವಿದೆ ಅಲ್ಲಿ ದ್ವಾದಶ ಜ್ಯೊತಿರ್ಲಿಂಗವು ಇದೆ. ಹಾಗೆ ಮುಂದೆ ಕಡಿದಾದ ಬೆಟ್ಟವನ್ನು ಏರುತ್ತಾ ಹೋದರೆ ಎತ್ತರವಾದ ಬಂಡೆಯ ಮೇಲೆ ನಂದಿ ವಿಗ್ರಹವಿದೆ. ಇದನ್ನು ಪ್ರದಕ್ಷಿಣೆ ಹಾಕುವುದೇ ಒಂದು ಸಾಹಸದ ಕೆಲಸ. ಕಾಲು ಇಡಲು ಕೂಡ ಜಾಗ ಚಿಕ್ಕದು ಹಾಗು ಮತ್ತೊಂದು ಕಡೆ ಆಳವಾದ ಪ್ರಪಾತ.

ನಂತರ ಮುಂದುವರೆದರೆ ಬೆಟ್ಟದ ಮೇಲೆ ಗಂಗಾಧರೇಶ್ವರ ದೇವಾಲಯ ನೋಡಬಹುದು. ಇಲ್ಲಿರುವ ಮತ್ತೊಂದು ಆಕರ್ಷಣೆ ಎಂದರೆ ಬೆಟ್ಟದ ತುದಿಯಲ್ಲಿ ಕಟ್ಟಿರುವ ಬೆಳ್ಳೀ ಗಂಟೆಗಳು. ಈ ಗಂಟೆಗಳನ್ನು ಕಟ್ಟಿದವರು ಎಂಟೆದೆಯ ಭಂಟರೇ ಇರಬೇಕು. ಇಲ್ಲಿ ನೋಡಬೇಕಾದ ಮತ್ತೊಂದು ಜಾಗ ನಾಟ್ಯ ರಾಣಿ ಶಾಂತಲೆಯು ಕೆಳಗೆ ಬಿದ್ದ ಜಾಗ. ಇಲ್ಲಿ ಶ್ರೀ ಹೊನ್ನಾದೇವಿ ದೇವಸ್ಥಾನವೂ ಅಷ್ಟೇ ಪ್ರಮುಖವಾದ ದೇವಸ್ಥಾನವಾಗಿದೆ. ಶ್ರೀ ಗಂಗಾಧರೇಶ್ವರ ಮತ್ತು ಶ್ರೀ ಹೊನ್ನಾದೇವಿ ದೇವಸ್ಥಾನಗಳು ಗವಿಗಳಲ್ಲಿವೆ. ಪ್ರತಿ ವರ್ಷ ಜನವರಿ ತಿಂಗಳಿನ ಸಂಕ್ರಾಂತಿ ಹಬ್ಬದ ದಿನ ಎರಡೂ ದೇವರುಗಳಿಗೆ ವಿವಾಹ ಮಹೋತ್ಸವವನ್ನು ಮಾಡಲಾಗುತ್ತದೆ. ಆ ದಿನ ಮುಂಜಾನೆ, ಬೆಟ್ಟದ ಮೇಲಿನ ಕಲ್ಲಿನಿಂದ ಗಂಗಾ ಜಲ ಹೊರ ಹೊಮ್ಮುತ್ತದೆ. ಆದೇ ಜಲವನ್ನು ವಾದ್ಯಗೋಷ್ಠಿಗಳ ಸಹಿತದೊಂದಿಗೆ ತಂದು ಅದೇ ಪವಿತ್ರವಾದ ನೀರಿನಿಂದ ಶ್ರೀ ಹೊನ್ನಾದೇವಿಯನ್ನು ಶ್ರೀ ಗಂಗಾಧರೇಶ್ವರನಿಗೆ ಧಾರೆ ಎರೆದು ಕೊಡಲಾಗುತ್ತದೆ. ಇಲ್ಲಿ ಶಂಕರಾಚಾರ್ಯರ ಶಾಖಾ ಮಠವಿರುತ್ತದೆ. ಶಾರದಾಂಬೆಯ ದೇವಸ್ಥಾನವಿರುತ್ತದೆ. ತೋಪಿನ ಗಣೇಶ ಬೃಹದಾಕಾರದಲ್ಲಿರುತ್ತದೆ. 108 ಲಿಂಗಗಳನ್ನುಳ್ಳ ಅಗಸ್ತ್ಯರ ದೇವಸ್ಥಾನವಿರುತ್ತದೆ. ಪಾತಾಳ ಗಂಗೆ ಇದ್ದು ಸದಾ ನೀರಿನಿಂದ ತುಂಬಿರುತ್ತದೆ. ವಿಚಿತ್ರವೆಂದರೆ ಇಲ್ಲಿ ಮಳೆಗಾಲದಲ್ಲಿ ನೀರು ಆಳಕ್ಕೆ ಹೋಗಿರುತ್ತದೆ. ಬೇಸಿಗೆಯಲ್ಲಿ ನೀರು ಹೆಚ್ಚಾಗಿ ಮೇಲಕ್ಕೆ ಬರುತ್ತದೆ. ಈ ಕ್ಷೇತ್ರವನ್ನು "ದಕ್ಷಿಣ ಕಾಶಿ" ಎಂದೂ ಕರೆಯುತ್ತಾರೆ.ಒಂದೊಂದು ದಿಕ್ಕಿನಿಂದ ಒಂದೊಂದು ಆಕಾರದಲ್ಲಿ ಗೋಚರಿಸುವ ಶಿವಗಂಗೆಯ ಬೆಟ್ಟ, ಸಕಲ ಚರಾಚರಗಳಲ್ಲಿಯೂ ಸೃಷ್ಠಿಕರ್ತನ ಸಾನ್ನಿಧ್ಯವಿದೆ ಎಂಬ ಭಗವದ್ಗೀತೆಯನ್ನು ನೆನಪಿಸುವುದು ಶಿವಗಂಗೆಯ ಮತ್ತೊಂದು ವೈಶಿಷ್ಟ್ಯ.ಶಿವಗಂಗೆ ಬೆಟ್ಟವನ್ನು ಉತ್ತರದಿಂದ ನೋಡಿದರೆ ಸರ್ಪದಂತೆಯೂ, ದಕ್ಷಿಣದಿಂದ ಗಣೇಶನಂತೆಯೂ, ಪೂರ್ವದಿಂದ ನಂದಿಯಂತೆಯೂ, ಪಶ್ಚಿಮದಿಂದ ಲಿಂಗದಂತೆಯೂ ಕಾಣುತ್ತದೆ.

ತುಪ್ಪವೇ ಬೆಣ್ಣೆಯಾಗುವ ಪವಾಡ

ಬೆಟ್ಟ ಹತ್ತಲು ಶುರು ಮಾಡಿದಾಗ ಮೊದಲು ನಿಮಗೆ ಗಂಗಾಧರೇಶ್ವರನ ದೇವಾಲಯ ಸಿಗುತ್ತೆ. ಈ ದೇವಸ್ಥಾನಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಗಣೇಶನ ದೇಗುಲವೂ ಇದೆ. ಗಂಗಾಧರೇಶ್ವರ ದೇವಾಲಯ ಬೆಟ್ಟದ ಆರಂಭದಲ್ಲೇ ಇದೆ. ಇಲ್ಲಿ ಉದ್ಭವ ಶಿವಲಿಂಗವಿದೆ. ಇಲ್ಲಿ ಪ್ರಪಂಚದ ಅದ್ಭುತವೊಂದು ನಡೆಯುತ್ತೆ. ನಾವೆಲ್ಲ ನೋಡಿರೋದು ಬೆಣ್ಣೆಯಿಂದ ತುಪ್ಪ ಬರುತ್ತೆ ಅಂತಾ. ಆದ್ರೆ, ಇಲ್ಲಿ ಶಿವ ಲಿಂಗದ ಮೇಲೆ ತುಪ್ಪವನ್ನ ಹಾಕಿದರೆ ಅದು ಬೆಣ್ಣೆಯಾಗಿ ಪರಿವರ್ತನೆ ಆಗುತ್ತೆ. ಇದೊಂದು ನಿಜಕ್ಕೂ ಅಸಕ್ತಿದಾಯಕ ಪವಾಡ. ಅದರಲ್ಲೂ ಅಭಿಷೇಕದ ಸಮಯದಲ್ಲಿ ಭಕ್ತರು ಈ ಪವಾಡವನ್ನು ನೋಡಬಹುದು. ಅಷ್ಟೇ ಅಲ್ಲ ಬೆಣ್ಣೆಯಾಗುವ ಈ ತುಪ್ಪಕ್ಕೆ ಔಷಧೀಯ ಶಕ್ತಿ ಇದೆ ಮತ್ತು ಅನೇಕ ಖಾಯಿಲೆಗಳನ್ನು ಗುಣಪಡಿಸಬಹುದು ಎಂಬುದು ಇಲ್ಲಿ ನಂಬಿಕೆ.

ದೇವಸ್ಥಾನದೊಳಗೆ ಸುರಂಗ

ಗಂಗಾಧರೇಶ್ವರ ದೇಗುಲದಲ್ಲೇ ಒಂದು ಸುರಂಗವಿದೆ. ಈಗಲೂ ಅದನ್ನ ಕಾಣಬಹುದು. ಈ ಸುರಂಗದಲ್ಲಿ ಮುಂದುವರಿದರೆ ಅದು ಬೆಂಗಳೂರಿನಲ್ಲಿರುವ ಗವಿಗಂಗಾಧರೇಶ್ವರ ದೇವಸ್ಥಾನಕ್ಕೆ ಬಂದು ತಲುಪುತ್ತಂತೆ. ಆದ್ರೆ, ಈಗ ಈ ಸುರಂಗದಲ್ಲಿ ಹೋಗಲು ಸಾಧ್ಯವಿಲ್ಲ. ಕಾರಣ ಉಸಿರಾಟದ ಸಮಸ್ಯೆಯಾಗುತ್ತೆ ಮತ್ತು ಸುರಂಗದ ಮಧ್ಯದಲ್ಲಿ ಹಾವುಗಳ ಇರುವ ಸಾಧ್ಯತೆ ಇರುತ್ತೆ. ಅಷ್ಟೇ ಅಲ್ಲ ಈಗ ಕೇವಲ ಸುರಂಗ ನೋಡಬಹುದಷ್ಟೇ ಹೋಗಲು ಮಾತ್ರ ಬಿಡೋದಿಲ್ಲ.

ಅಂದುಕೊಂಡಿದ್ದು ಆಗುತ್ತೋ ಇಲ್ವೋ ಅನ್ನೋದರ ಪರೀಕ್ಷೆ

ಗಂಗಾಧರೇಶ್ವರ ದೇಗುಲದಲ್ಲಿ ಶಿವನ ದರ್ಶನ ಪಡೆದ ನಂತರ, ಮುಂದೆ ಹಾಗೆ ಬೆಟ್ಟ ಹತ್ತಲು ಆರಂಭ ಮಾಡಿದರೆ, ನಿಮಗೆ ಅಲ್ಲೊಂದು ಕಡಿದಾದ ಕಲ್ಲು ಬಂಡೆ ಸಿಗುತ್ತೆ. ಅದನ್ನ ಏರುವುದಕ್ಕೆ ಮೆಟ್ಟಿಲುಗಳಿವೆ. ಹಿಡಿದುಕೊಳ್ಳಲು ಕಬ್ಬಿಣದ ಸರಳುಗಳನ್ನೂ ಈಗ ಮಾಡಿದ್ದಾರೆ. ಹಾಗೆ ಮೇಲತ್ತಿದಾಗ, ನಿಮ್ಮ ದಣಿವಾರಿಸಿಕೊಳ್ಳೋಕೆ ಅಲ್ಲೊಂದಿಷ್ಟು ಕಬ್ಬಿನ ಹಾಲು, ಸೌತೆಕಾಯಿ, ಚಹಾ, ಕೋಲ್ಡ್ರಿಂಕ್ಸ್ ಹೀಗೆ ನಿಮಗೆ ಬೇಕಾಗಿರುವ ವಸ್ತುಗಳು ಸಿಗುತ್ತೆ. ಸ್ವಲ್ಪ ಸುಧಾರಿಸಿಕೊಂಡು ಮತ್ತೆ ಬೆಟ್ಟ ಏರಲು ಶುರು ಮಾಡಿದರೆ, ಅಲ್ಲೊಂದು ಒಳಕಲ್ಲು ತೀರ್ಥ ಎನ್ನುವ ಮತ್ತೊಂದು ಸ್ಥಳ ಸಿಗುತ್ತೆ. ಇಲ್ಲಿರುವ ಒಳಕಲ್ಲಿನಲ್ಲಿ ವರ್ಷದ 365 ದಿನಗಳೂ ನೀರು ದೊರೆಯುತ್ತೆ. ಆದ್ರೆ, ಇಲ್ಲಿ ನೀವು ಅಂದುಕೊಂಡಿದ್ದು ಈಡೇರುತ್ತೋ ಇಲ್ವೋ ಅನ್ನೋದರ ಅಗ್ನಿ ಪರೀಕ್ಷೆ ಮಾಡಿಕೊಳ್ಳಬಹುದು. ಅದೇನಂದ್ರೆ, ನೀವು ಏನಾದ್ರು ಅಂದುಕೊಂಡು ಅದು ಆಗುತ್ತೋ ಇಲ್ವೋ ಅಂತಾ ತಿಳಿದುಕೊಳ್ಳಲು ಈ ಒಳಕಲ್ಲು ತೀರ್ಥದಲ್ಲಿ ಕೈ ಹಾಕಿದರೆ, ನಿಮ್ಮ ಕೆಲಸ ಆಗುತ್ತೆ ಅನ್ನೋದಾದ್ರೆ ನಿಮ್ಮ ಕೈಗೆ ನೀರು ಸಿಗುತ್ತೆ. ಕೆಲಸ ಆಗೋದಿಲ್ಲ ಅನ್ನೋದಾದ್ರೆ, ನಿಮಗೆ ನೀರು ಸಿಗೋದೆ ಇಲ್ಲ. ಇದು ಇಲ್ಲಿನ ನಂಬಿಕೆ. ತುಂಬ ಜನರ ಅನುಭವದ ಪ್ರಕಾರ ಇದು ಸತ್ಯ ಅಂತಾನೆ ಹೇಳ್ತಾರೆ. ಎಲ್ಲವೂ ಅವರವರ ನಂಬಿಕೆ ಮೇಲೆ ಬಿಟ್ಟದ್ದು. ಈ ಒಳಕಲ್ಲಿನಲ್ಲಿ ವರ್ಷದ 365 ದಿನಗಳೂ ನೀರು ದೊರೆಯುವುದೇ ಒಂದು ಪವಾಡ.

ಇತಿಹಾಸ

ಹಿಂದೆ ಈ ಸ್ಥಳವು ಹೊಯ್ಸಳ ರಾಜರ ನಿಯಂತ್ರಣದಲ್ಲಿತ್ತು ಮತ್ತು ವಿಷ್ಣುವರ್ಧನನ ಪತ್ನಿ ರಾಣಿ ಶಂತಲಾ ಅವರು ಮಗನಿಗೆ ಜನ್ಮ ನೀಡಲಿಲ್ಲ ಎಂಬ ಖಿನ್ನತೆಯಿಂದ ಅವರು ಈ ಬೆಟ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡರು, ಏಕೆಂದರೆ ಅವರ ಮತ್ತು ಆ ಸ್ಥಳವನ್ನು ಶಂತಲಾ ಡ್ರಾಪ್ ಎಂದು ಕರೆಯುತ್ತಾರೆ. 16 ನೇ ಶತಮಾನದಲ್ಲಿ ಈ ಗುಡ್ಡವು ಶಿವಪ್ಪ ನಾಯಕ ಕೋಟೆಯಾಯಿತು. ಮುಂದೆ ಬೆಂಗಳೂರಿನ ಸಂಸ್ಥಾಪಕ, ಮಾಗಡಿ ಕೆಂಪೇಗೌಡ ಕೋಟೆಯನ್ನು ಸುಧಾರಿಸಿದರು ಮತ್ತು ಈ ಕೋಟೆಯಲ್ಲಿ ತನ್ನ ನಿಧಿಯ ಭಾಗವನ್ನು ಉಳಿಸಿಕೊಂಡರು.

ಕುಮುದ್ವತಿ ನದಿಯ ಮೂಲ

ಶಿವಗಂಗೆ ಬೆಟ್ಟಗಳಲ್ಲಿ ಕುಮುದ್ವತಿ ನದಿಯ ಮೂಲವಿದೆ, ಇದು ಅರ್ಕಾವತಿ ನದಿಯ ಉಪನದಿಯಾಗಿದೆ. ಬೆಂಗಳೂರಿನ ಗ್ರಾಮೀಣ ಜಿಲ್ಲೆಯ ನೆಲಮಂಗಲ ತಾಲ್ಲೂಕು ಮತ್ತು ರಾಮನಗರ ಜಿಲ್ಲೆಯ ಮಮಾಗಡಿ ತಾಲೂಕಿನ ಕೆಲವು ಭಾಗಗಳಲ್ಲಿ 460 ಕಿ.ಮೀ ದೂರ ಕುಮುದ್ವತಿ ನದಿ ಹರಿಯುತ್ತದೆ. ನದಿಯು ಜಲಾನಯನ ಪ್ರದೇಶದ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿನ ಮೂಲವಾಗಿದೆ.


Sign In  /  Register

Most Downloaded Articles

Acquire employability in Indian Sinario

The Pink Sonnet

ಸರ್ಕಾರಿ ದೇಗುಲ

Department of Mathematics @ GFGC Tumkur

Knowledge and Education- At Conjecture




© 2018. Tumbe International Journals . All Rights Reserved. Website Designed by ubiJournal